ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ

Puttaswamy
Published on

ಚಾಮರಾಜನಗರ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಸೋಲಿಗರು ಮತ್ತು ಬುಡಕಟ್ಟು ಸಮುದಾಯಗಳಿಗೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಮೊದಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಚಾಮರಾಜನಗರ ವಕೀಲ ರಾಮಸಮುದ್ರ ಪುಟ್ಟಸ್ವಾಮಿ ಹೇಳಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ವಿಜಯವಾಣಿಯೊಂದಿಗೆ ಮಾತನಾಡಿದರು. ಬಹು ಮುಖ್ಯವಾಗಿ ಜಿಲ್ಲೆಯಲ್ಲಿ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗುತ್ತವೆ. ಅವುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಕೆಲಸವಾಗಬೇಕು. ಜಿಲ್ಲಾ ಕೇಂದ್ರಕ್ಕೆ ಕುಡಿಯುವ ನೀರಿನ ಶಾಶ್ವತ ಯೋಜನೆ ಜಾರಿಗೊಳಿಸಲು ನೂತನ ಸಂಸದರು ಶ್ರಮಿಸಬೇಕು. ಕೇಂದ್ರೀಯ ಶಾಲೆಯಲ್ಲಿ ಈ ಹಿಂದೆ ಇದ್ದ ಸಂಸದರ ಕೋಟಾ ಮುಂದುವರಿಸಲು, ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಬೇಕು. ಪ್ರವಾಸೋದ್ಯಮಕ್ಕೆ ಉತ್ತೇಜ ನೀಡಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net