ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಕೊಳ್ಳೇಗಾಲ ಚಿಲಕವಾಡಿ ಬೆಟ್ಟದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2024-25ನೇ ಸಾಲಿಗೆ ಎರಡನೇ ವರ್ಷಕ್ಕೆ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಸೈನ್ಸ್ (ಸಿಎಸ್), ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಷನ್ (ಇ ಮತ್ತು ಸಿ) ಕೋರ್ಸ್‌ಗಳು ಲಭ್ಯವಿದೆ. ಸಂಸ್ಥೆಯಲ್ಲಿ ಅರ್ಜಿಗಳನ್ನು ಜೂ.25 ರವರೆಗೆ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೊಳ್ಳೇಗಾಲ ಚಿಲಕವಾಡಿ ಬೆಟ್ಟದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಮೊ.ಸಂ 9972014274, 7892023182 ಸಂಪರ್ಕಿಸಬಹುದೆಂದು ಸಂಸ್ಥೆಯ ಪ್ರಾಂಶುಪಾಲ ಕೆ.ಜಿ. ಕಲ್ಲೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net