ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಮಲ್ಲಯ್ಯನಪುರ ಆದರ್ಶ ವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ 8 ಮತ್ತು 9ನೇ ತರಗತಿಗೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಜೂ.15 ಕೊನೆಯ ದಿನವಾಗಿದೆ. ಕನ್ನಡ, ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಶೇ.16ರಷ್ಟು ಪ್ರಶ್ನೆಗಳಿದ್ದು, ಶೇ.10ರಷ್ಟು ಮಾನಸಿಕ ಸಾಮರ್ಥ್ಯ ಹಾಗೂ ಶೇ. 10ರಷ್ಟು ಬೌದ್ಧಿಕ ಸಾಮರ್ಥ್ಯದ ಮೇಲೆ ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. 8ನೇ ತರಗತಿಯಲ್ಲಿ ಜಿಎಂ-2, 2ಬಿ-1 ಒಟ್ಟು 3 ಹಾಗೂ 9ನೇ ತರಗತಿಯಲ್ಲಿ ಜಿಎಂ-1 ಸೀಟುಗಳು ಖಾಲಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net