ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಯಳಂದೂರು ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ 2023-24ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಸಿರುವ ಸಮುದಾಯದ ವಿದ್ಯಾರ್ಥಿಗಳು ಹಾಗೂ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ವ್ಯಾಸಂಗ ಮಾಡಿದ ಶಾಲೆ, ಕಾಲೇಜು ವಿವರ ಮತ್ತು ಜಾತಿ ಪ್ರಮಾಣಪತ್ರ ಜೆರಾಕ್ಸ್ ಪ್ರತಿಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂ.30 ರೊಳಗೆ ಸಂಘದ ಕಚೇರಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಂಬಳೆ ಬಿ.ನಂಜುಂಡಸ್ವಾಮಿ( ಗಿರೀಶ್) ಮೊ. 7090872795, ಕಾರ್ಯದರ್ಶಿ ಕೆಸ್ತೂರು ಮಲ್ಲಣ್ಣ ಮೊ.6363815406 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net