

ಹನೂರು: ತಾಲೂಕಿನ ಕುರಟ್ಟಿಹೊಸೂರು ಗ್ರಾಮದಲ್ಲಿ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದು, ನೇತ್ರದಾನ ಮಾಡುವುದರ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.
ಕುರಟ್ಟಿಹೊಸೂರು ಗ್ರಾಮದ ಅಂಬರೀಶ್ (27) ಮೃತರು. ಈತ 4 ದಿನಗಳ ಹಿಂದೆ ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದನು. ಈತನನ್ನು ಸಂಬಂಧಿಕರು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದು, ಸಂಜೆ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.
ಈತ ಮರಣದ ಬಳಿಕ ಕಣ್ಣುಗಳನ್ನು ದಾನ ಮಾಡುವ ಇಚ್ಛೆಯನ್ನು ಹೊಂದಿದ್ದರು. ಅದರಂತೆ ಸಂಬಂಧಿಕರ ಒಪ್ಪಿಗೆಯಂತೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೇತ್ರದಾನ ಮಾಡಲಾಗಿದೆ ಎಂದು ಮೃತನ ಸ್ನೇಹಿತರಿಂದ ತಿಳಿದು ಬಂದಿದೆ.