ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

Published on

ಚಾಮರಾಜನಗರ: ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘದ ಮೊದಲ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಘದ ಅಧ್ಯಕ್ಷ ಗೌರಿಶಂಕರ್ ಹಾಗೂ ಪದಾಧಿಕಾರಿಗಳು ಬುಧವಾರ ಭೂಮಿಪೂಜೆ ನೆರವೇರಿಸಿದರು. ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸಪ್ಪ, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ, ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಮುದ್ದು ಬಸವಣ್ಣ, ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷೆ ವಸಂತಮ್ಮ, ಸಹಕಾರ ಸಂಘದ ಉಪಾಧ್ಯಕ್ಷ ಕುಮಾರಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net