ಅನಾರೋಗ್ಯದಿಂದ ಬೇಸತ್ತ ಮಹಿಳೆ ಆತ್ಮಹತ್ಯೆ

Crime Logo
Published on

ಹನೂರು: ತಾಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಬುಧವಾರ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಲೋಕೇಶ್ ಅವರ ಪತ್ನಿ ಮಂಜುಳಾ (35) ಮೃತಪಟ್ಟ ದುರ್ದೈವಿ. ಮಲೆ ಮಹದೇಶ್ವರ ಬೆಟ್ಟದವರಾಗಿದ್ದು, ಪೆದ್ದನಪಾಳ್ಯ ಗ್ರಾಮದ ಲೋಕೇಶ್ ಅವರೊಂದಿಗೆ ವಿವಾಹವಾಗಿತ್ತು. ಕಳೆದ 2 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇವರು ಗ್ರಾಮ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net