ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ

mani
Published on

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರೋಟರಿ ಸಿಲ್ಕ್ ಸಿಟಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಇಂದು ನಡೆಯಿತು.

ಬೆಳಗ್ಗೆ ನಗರದ ಚಾಮರಾಜೇಶ್ವರ ದೇವಸ್ಥಾನ ಮುಂಭಾಗದಿಂದ ಜಾಥಾ ಆರಂಭವಾದ ಮೆರವಣಿಗೆ ರೋಟರಿ ಭವನದವರೆಗೆ ಸಾಗಿತು. ಬಳಿಕ ರೋಟರಿ ಭವನದಲ್ಲಿ ಸಮಾರಂಭ ಹಾಗೂ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಶಿಬಿರ ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net