ಮಣಿಪುರ ಹಿಂಸಾಚಾರ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

12raju9
Published on

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಮಣಿಪುರ ಹಿಂಸಾಚಾರದಕ್ಕು ಕ್ರೈಸ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.'

ನಗರದ ಶ್ರೀಭುವನೇಶ್ವರಿ ವೃತ್ತದಲ್ಲಿ ಮಂಗಳವಾರ ರಾತ್ರಿ ಮೇಣದ ಬತ್ತಿ ದೀಪ ಬೆಳಗಿದ ಪ್ರತಿಭಟನಾಜಕಾರರು ಪ್ರಧಾನಮಂತ್ರಿ ನರೇಂದ್ರಮೋದಿ ವಿರುದ್ಧ ೋಷಣೆ ಕೂಗಿದರು. ಇದೇ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾಹರ್ ಅಹಮ್ಮದ್ ಮಾತನಾಡಿ, ಮೀಸಲಾತಿ ವಿಚಾರವನ್ನು ಅನಾವಶ್ಯಕವಾಗಿ ಕೆದಕಿ, ಸಮುದಾಯಗಳ ನಡುವೆ ವೈಷಮ್ಯವನ್ನು ಹುಟ್ಟು ಹಾಕಿ, ಮಣಿಪುರದಲ್ಲಿ ದೊಡ್ಡ ಮಟ್ಟದ ಹಿಂಸಾಚಾರಕ್ಕೆ ಬಿಜೆಪಿ ನಾಂದಿ ಹಾಡಿತು. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಮಣಿಪುರದಲ್ಲಿ ಹಬ್ಬಿರುವ ಈ ದ್ವೇಷದ ವಾತಾವರಣ ಮತ್ತು ಹಿಂಸಾಚಾರವನ್ನು ಹತೋಟಿಗೆ ತರುವ ಗಂಭೀರ ಪ್ರಯತ್ನಗಳನ್ನು ಮಾಡದೆ ಅದರಿಂದ ತನಗೆ ಮುಂದೆ ಆಗಬಹುದಾದ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಮುಳುಗಿರುವುದು ದುರಂತ ಎಂದು ದೂರಿದರು.

ಮಣಿಪುರ ಹಿಂಸಾಚಾರ ವಿಚಾರದಲ್ಲಿ ಪ್ರಧಾನಿ ನರೇಂದ್ರಮೋದಿ ಮೌನ ಹಾಗೂ ನಿರ್ಲಕ್ಷ್ಯವಹಿಸಿದ್ದಾರೆ. ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಿ ತಕ್ಷಣ ಹಿಂಸಾಚಾರವನ್ನು ಹತೋಟಿಗೆ ತರುವ ಮೂಲಕ ಮಣಿಪುರದಲ್ಲಿ ಶಾಂತಿ ಕಾಪಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಿ.ಎಸ್.ಸೈಯದ್ ಆರ್ೀ, ಪ್ರಧಾನ ಕಾರ್ಯದರ್ಶಿ ಮಹೇಶ್, ಕಾರ್ಯದರ್ಶಿ ಜಬೀನೂರ್, ಶಿವಣ್ಣ, ಕ್ರೈಸ್ತ ಮುಖಂಡರಾದ ಫಾಸ್ಟರ್ ಮಲ್ಲೇಶ್, ಥಾಮಸ್, ರಾಜೇಶ್, ದಲಿತ ಸಮುದಾಯದ ಮುಖಂಡ ಸಂಘಸೇನಾ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net