ಸೌಹಾರ್ದಯುತವಾಗಿ ಬಕ್ರೀದ್ ಆಚರಿಸಿ

14 HANUR 3
Published on

ಹನೂರು : ಅಹಿತಕರ ಘಟನೆಗಳು ನಡೆಯದಂತೆ ಶಾಂತಿ, ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸಬೇಕು ಎಂದು ಇನ್ಸ್‌ಪೆಕ್ಟರ್ ಶಶಿಕುಮಾರ್ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿವಿಧ ಗ್ರಾಮದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಬಕ್ರೀದ್ ಮುಸ್ಲಿಮರ ಪವಿತ್ರ ಹಬ್ಬ. ಈ ದಿನ ಮಸೀದಿ ಹಾಗೂ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಹಾಗಾಗಿ, ಆಯಾ ಗ್ರಾಮದಲ್ಲಿ ಹಿರಿಯ ಮುಖಂಡರು ಶಾಂತಿಯುತವಾಗಿ ಹಬ್ಬ ಆಚರಿಸಬೇಕು. ಆ ಮೂಲಕ ಕಾನೂನು ಸುವ್ಯವಸ್ಥೆಗೆ ಪೊಲೀಸರಿಗೆ ಸಹಕಾರ ನೀಡಬೇಕು. ಗ್ರಾಮಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಮುಖಂಡರಾದ ಅಮಿನ್, ಜಸೀಂಪಾಷ, ಇಸ್ಮಾಯಿಲ್, ಜಾಬೀರ್, ಅಪ್ರೋಜ್‌ಖಾನ್, ರೆಹಮತ್ ಉಲ್ಲಖಾನ್ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net