

ಚಾಮರಾಜನಗರ: ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕಡ್ಡಾಯವಾಗಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳಾಗಿದ್ದು ಗುರುತಿನ ಚೀಟಿಯನ್ನು ಹೊಂದಿರಬೇಕು. ಅಭ್ಯರ್ಥಿಯು ಭಾವಚಿತ್ರ, ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ವಾಹನ ಸೌಲಭ್ಯ ಪಡೆಯ ಬೇಕಿದ್ದಲ್ಲಿ ಸಂಬಂಧಪಟ್ಟ ವಾಹನ ಚಾಲನಾ ಪರವಾನಗಿಯೊಂದಿಗೆ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂ.29 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಮುಬಾರಕ್ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಭವನದ ಹತ್ತಿರವಿರುವ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.