19ರಂದು ವಿಶ್ವ ಸಿಕಲ್ ಸೆಲ್ ಅನಿಮಿಯಾ ದಿನಾಚರಣೆ

660-70
Published on

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಸಿಕಲ್ ಸೆಲ್ ಅನಿಮಿಯಾ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜೂ.19ರಂದು ಚಾಮರಾಜನಗರ ತಾಲೂಕಿನ ಪುಣಜನೂರು ಗ್ರಾಮದ ಶ್ರೀಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ.

ಬುಡಕಟ್ಟು ಜನಾಂಗದವರು ವಾಸಿಸುವ ಕಾಲೋನಿಗಳ ವ್ಯಾಪ್ತಿಯಲ್ಲಿನ 24 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಚಾಮರಾಜನಗರ ತಾಲೂಕಿನ ಪುಣಜನೂರು ಶ್ರೀಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲಾ ಆವರಣದಲ್ಲಿ ಸಿಕೆಲ್ ಸೆಲ್ ಅನಿಮಿಯಾ ತಪಾಸಣೆಯನ್ನು ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಂಜುಳಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net