

ಚಾಮರಾಜನಗರ: ನಾಡಪ್ರಭು ಶ್ರೀಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ಜೂ. 18ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಈ ಸಭೆಗೆ ಶ್ರೀ ಕೆಂಪೇಗೌಡ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲ ಸಮುದಾಯದ ಮುಖಂಡರು ಆಗಮಿಸಿ ಸಲಹೆ, ಸೂಚನೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.