ಜಿಲ್ಲೆಯಲ್ಲಿ ನಿಲ್ಲದ ಬಯಲು ಬಹಿರ್ದೆಸೆ

IMG20240228133814
Published on

ಚಾಮರಾಜನಗರ : ಜಿಲ್ಲೆಯನ್ನು ಬಯಲು ಬಹಿರ್ದೆಸೆಮುಕ್ತವಾಗಿಸಲು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಇಂದಿಗೂ ಜಾರಿಗೊಳಿಸುತ್ತಲೇ ಇದ್ದರೂ, ಗ್ರಾಮೀಣ ಪ್ರದೇಶದಲ್ಲಿ ಬಯಲು ಬಹಿರ್ದೆಸೆ ಮುಕ್ತವಾಗದೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ.

ಚಾಮರಾಜನಗರ, ಯಳಂದೂರು, ಕೊಳ್ಳೇಗಾಲ, ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಹೆಚ್ಚಿನ ಗ್ರಾಮಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಶೌಚಗೃಹ ನಿರ್ಮಾಣಕ್ಕೆ ಜಾಗವಿಲ್ಲದೆ ಬಯಲು ಹಾಗೂ ಹೊಲ-ಗದ್ದೆಗಳನ್ನೇ ಬಹಿರ್ದೆಸೆಗೆ ಅವಲಂಬಿಸಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ವಾಸಿಸುವ ಜನರು ಇಂದಿಗೂ ಶೌಚಗೃಹವನ್ನು ನಿರ್ಮಿಸಿಕೊಳ್ಳಲು ಆಗುತ್ತಿಲ್ಲ. ಗ್ರಾಮ ಪಂಚಾಯಿತಿ ಅನುದಾನದಲ್ಲಿ ಹಲವರು ಶೌಚಗೃಹಗಳನ್ನು ನಿರ್ಮಿಸಿಕೊಂಡಿದ್ದರೂ ಇಂದಿಗೂ ಹಣ ಬಿಡುಗಡೆಯಾಗಿಲ್ಲ. ಸಾಕಷ್ಟು ಜನರು ಶೌಚಗೃಹಗಳಿದ್ದರೂ ವಿವಿಧ ಕಾರಣಗಳಿಂದ ಬಳಕೆ ಮಾಡುತ್ತಿಲ್ಲ.
ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣ ಮಾಡಿರುವ ಸಮುದಾಯ ಶೌಚಗೃಹಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೆ ಇರುವುದು, ಬಳಕೆಯ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸದೆ ಇರುವುದು ಹಾಗೂ ಇತರ ಕಾರಣಗಳಿಂದ ಜನರು ಬಹಿರ್ದೆಸೆಗೆ ಬಯಲನ್ನೇ ಅವಲಂಬಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net