

ಚಾಮರಾಜನಗರ: ರಾಜ್ಯ ಅಭಿವೃದ್ದಿಗೆ ಪೂರಕವಾಗಿರುವ ಜನಪರ ಹಾಗೂ ಸರ್ವ ಸ್ಪರ್ಶಿ ಹಾಗೂ ಸರ್ವ ವ್ಯಾಪಿಯ ಅಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಾದಾಪುರ ರವಿಕುಮಾರ್ ತಿಳಿಸಿದರು.
2023-24 ನೇ ಸಾಲಿನ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ರವಿಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಮಂಡಿಸುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾರೆ. ಬಜೆಟ್‌ನಲ್ಲಿ ಅವರ ಅನುಭವದ ಪರಿಪಕ್ವತೆಯನ್ನು ನೀಡಿದ್ದಾರೆ. ರೈತರು ಹಾಗೂ ಬಡವರ ಪರವಾಗಿದೆ. ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕೆ ಆಸಕ್ತಿ ವಹಿಸಿದ್ದಾರೆ ಎಂದರು.
ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 5 ಗ್ಯಾರಂಟಿಗಳನ್ನು ಜಾರಿ ಮಾಡಿ, ಅವೆಲ್ಲವು ಸಮಾಜದ ಕಟ್ಟಕಡೆಯ ವ್ಯಕ್ತಿಯು ತಲುಪುವ ನಿಟ್ಟಿನಲ್ಲಿ 50 ಸಾವಿರ ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ. ಜನಸಾಮಾನ್ಯರಿಗೆ ಯಾವುದೇ ಹೆಚ್ವುವರಿ ತೆರಿಗೆಗಳನ್ನು ಹಾಕದೆ ರಾಜ್ಯ ಅಭಿವೃದ್ದಿಗೆ ಪೂರಕವಾಗಿರುವ ದೂರದೃಷ್ಟಿಯುಳ್ಳ ಬಜೆಟ್ ಆಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.