

ಚಾಮರಾಜನಗರ: ಬಹುತೇಕ ಕುಟುಂಬಗಳು ನರೇಗಾ ಯೋಜನೆಯಡಿ ಸಹಾಯಧನ ಪಡೆದು ಶೌಚಗೃಹ ನಿರ್ಮಿಸಿಕೊಂಡಿದ್ದಾರೆ. ಆದರೆ ಇದರಲ್ಲಿ ಬಹುತೇಕ ಜನರು ಇಂದಿಗೂ ಬಯಲನ್ನೇ ಆಶ್ರಯಿಸುತ್ತಿದ್ದಾರೆ ಎಂದು ಹನೂರು ತಾಲೂಕಿನ ಕಣ್ಣೂರು ಗ್ರಾಮದ ಕುಮಾರ್ ದೂರಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಬಯಲು ಬಹಿರ್ದೆಸೆಗೆ ಮುಕ್ತಿ ಸಿಗದ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ಗ್ರಾಮದ ಹೊರ ವಲಯದಲ್ಲಿ ವಾತವರಣ ಹದಗೆಡುತ್ತಿದೆ. ಇದು ಗ್ರಾಪಂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ತಿಳಿದಿದೆ. ಆದರೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಇದರಿಂದ ಸ್ವಚ್ಛ ಭಾರತ್ ಯೋಜನೆಯಡಿ ಅನುದಾನ ಬಳಕೆಯಾದರೂ ಶೌಚಗೃಹ ಬಳಸುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಸಲಹೆ ನೀಡಿದ್ದಾರೆ.