ಜನರಲ್ಲಿ ಜಾಗೃತಿ ಅಗತ್ಯ

Rajanna
Published on

ಚಾಮರಾಜನಗರ: ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಜನರಿಗೆ ಶೌಚಗೃಹ ನಿರ್ಮಿಸಿಕೊಳ್ಳಲು ಜಾಗವಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಸಮುದಾಯ ಶೌಚಗೃಹಗಳನ್ನು ನಿರ್ಮಿಸಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಮೊಬಿಲಿಟಿ ಇಂಡಿಯಾ ಜಿಲ್ಲಾ ಸಂಯೋಜಕ ರಾಜಣ್ಣ ಒತ್ತಾಯಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಬಯಲು ಬಹಿರ್ದೆಸೆಗೆ ಮುಕ್ತಿ ಸಿಗದ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ಬಯಲು ಬಹಿರ್ದೆಸೆಯಿಂದಾಗುವ ದುಷ್ಪರಿಣಾಮಗಳು ಹಾಗೂ ರೋಗಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಇಲ್ಲವಾದರೆ ಸರ್ಕಾರದ ಮಟ್ಟದಲ್ಲೇ ಕಠಿಣ ಕಾನೂನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಒದಗಿಸಿದಂತಾಗುತ್ತದೆ. ಇಲ್ಲವಾದರೆ ಬಯಲು ಬಹಿರ್ದೆಸೆಮುಕ್ತ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net