ಜೂ.19ರಂದು ವಿವಿಧೆಡೆ ವ್ಯತ್ಯಯ

Power Cut
Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹರದನಹಳ್ಳಿ ಹಾಗೂ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 1ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಜೂ.19ರಂದು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ತಾಲೂಕಿನ ಮೂಡ್ನಾಕೂಡು, ಮುಕ್ಕಡಹಳ್ಳಿ, ಉಡಿಗಾಲ, ನಂಜದೇವನಪುರ, ಕಲ್ಪುರ, ದೇವಲಾಪುರ, ತಮ್ಮಡಹಳ್ಳಿ, ಎನ್.ಜೆ.ವೈ, ಹಾಗೂ ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಎಚ್.ಮೂಕಳ್ಳಿ, ಕುರುಬರಹುಂಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net