

ಚಾಮರಾಜನಗರ: ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಪಡಿಸುವ ಸಲುವಾಗಿ ತ್ರೈಮಾಸಿಕ ಜನಸಂಪರ್ಕ ಸಭೆಯನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ಜೂ.20ರಂದು ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಗರದ ನಿಗಮದ ಉಪವಿಭಾಗ ಕಚೇರಿಯ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ. ಗ್ರಾಹಕರು ವಿದ್ಯುತ್ ಕುರಿತ ಸಮಸ್ಯೆಗಳಿದ್ದಲ್ಲಿ ಸಭೆಗೆ ಹಾಜರಾಗಿ ತಿಳಿಸುವಂತೆ ನಿಗಮದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.