ಬೆಲೆ ಏರಿಕೆ ವಿರೋಧಿಸಿ ರೈತರ ಪ್ರತಿಭಟನೆ

Published on

ಚಾಮರಾಜನಗರ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಸಂತೇಮರಹಳ್ಳಿ ಮುಖ್ಯರಸ್ತೆಯ ಜಾಲಹಳ್ಳಿಹುಂಡಿ ರಸ್ತೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಂಚಾರ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಮುಖಂಡ ಮರಿಯಾಲ ಮಹೇಶ್ ಮಾತನಾಡಿ, ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಮೂಡ್ನಾಕೂಡು ಮಹೇಶ್, ಕಾಡಳ್ಳಿ ಚಿನ್ನಸ್ವಾಮಿ, ಪ್ರಭು, ಚಲುವರಾಜು, ಕೆರೆಹಳ್ಳಿ ಮಹೇಶ್ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net