23 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Mohan Nagu
Published on

ಚಾಮರಾಜನಗರ : ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ಜಿಲ್ಲಾ ಸಮಿತಿ ವತಿಯಿಂದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್ ನಗು ತಿಳಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಪಶು ಸಂಗೋಪನಾ, ರೇಷ್ಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸುವರು.
ಚಾಮರಾಜನಗರ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀಚನ್ನಬಸವ ಸ್ವಾಮೀಜಿ, ನಿಯೋಜಿತ ನಳಂದ ವಿಶ್ವವಿದ್ಯಾಲಯದ ಕಾರ್ಯದರ್ಶಿ ಬಂತೆ ಬೋಧಿದತ್ತತೇರ ಸಾನ್ನಿಧ್ಯ ವಹಿಸುವರು. ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಚಾಮರಾಜನಗರ ಸಂಸದ ಸುನೀಲ್‌ಬೋಸ್, ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಶಾಸಕ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಮುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಪ್ರತಿಭಾ ಪುರಸ್ಕಾರ ನೀಡುವರು.

ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್, ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಮಾಜಿ ಶಾಸಕರಾದ ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಮುಖಂಡರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಹೇಳಿದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 2023-24ನೇ ಸಾಲಿನಲ್ಲಿ ಶೇ.80ಕ್ಕಿಂತಲೂ ಹೆಚ್ಚು ಅಂಕ ಪಡೆದ ಹಾಗೂ ಪಿಯುಸಿಯಲ್ಲಿ ಶೇ.85ಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಎಲ್ಲ ಸಮುದಾಯಗಳ 523 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸರ್ಕಾರಿ ಶಾಲೆಯ ಸುಮಾರು 50 ಬಡ ವಿದ್ಯಾರ್ಥಿಗಳಿಗೆ ಸಮವಸ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎನ್‌ಎಸ್‌ಯುಐ ಜಿಲ್ಲಾ ಉಪಾಧ್ಯಕ್ಷ ಆರ್.ಎಸ್.ಅಕ್ಷಯ್‌ಕುಮಾರ್, ಮುತ್ತುರಾಜ್, ಸ್ಟಾನಿ ಬಾಲರಾಜ್, ಶಶಾಂಕ್, ಸುನೀಲ್‌ಕುಮಾರ್, ಪ್ರದೀಪ್, ನಂದನ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net