

ಚಾಮರಾಜನಗರ: ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜೂ.24ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.