

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ವತಿಯಿಂದ ನಾಡಪ್ರಭು ಶ್ರೀಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜೂ.27ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9.30 ಗಂಟೆಗೆ ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಾಲಯದ ಬಳಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಬೆಳಿಗ್ಗೆ 11 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಉಪಸ್ಥಿತಿ ವಹಿಸುವರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್‌ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಮಧು.ಜಿ. ಮಾದೇಗೌಡ, ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಎಸ್. ಜಯಣ್ಣ, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭಾ ಸದಸ್ಯರಾದ ಹೆಚ್.ಎಸ್. ಮಮತಾ ಪಾಲ್ಗೊಳ್ಳುವರು. ಮೈಸೂರು ದಕ್ಷಿಣ ವಲಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಡಾ. ಬಿ.ಸಿ. ವಿಜಯಕುಮಾರ್ ಬಲ್ಲೇನಹಳ್ಳಿ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.