ಮಹದೇವಸ್ವಾಮಿ, ಲತಾ ಅವಿರೋಧ ಆಯ್ಕೆ

21rajesh2
Published on

ಚಾಮರಾಜನಗರ: ತಾಲೂಕಿನ ಕೊತ್ತಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಮಹದೇವಸ್ವಾಮಿ (ಗಜ), ಉಪಾಧ್ಯಕ್ಷರಾಗಿ ಲತಾ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಮಹದೇವಸ್ವಾಮಿ ಹಾಗೂ ಲತಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣಾಧಿಕಾರಿ ನಾಗೇಶ್ ಅವಿರೋಧ ಆಯ್ಕೆ ಘೋಷಿಸಿದರು. ನೂತನ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಎಂಡಿಸಿಸಿ ಬ್ಯಾಂಕ್‌ನಿಂದ ದೊರೆಯುವ ಸೌಲಭ್ಯಗಳನ್ನು ಕೊಡಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net