

ಚಾಮರಾಜನಗರ : ಪ್ರಸ್ತುತ ಪ್ರತಿಯೊಬ್ಬರೂ ಒತ್ತಡದಲ್ಲಿ ಜೀವನ ನಡೆಸುತ್ತಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು ಸಲಹೆ ನೀಡಿದರು.
ಆಯುಷ್ ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣಗಳ ಸಂಸ್ಥೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ, ಯೋಗ ನಿರತ ಸಂಘ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ನಾವು ಬಳಕೆ ಮಾಡುತ್ತಿರುವ ಆಹಾರ ಪದಾರ್ಥಗಳು ಹಾಗೂ ಒತ್ತಡದ ಜೀವನ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ನಿರಂತರವಾಗಿ ಯೋಗ ಮಾಡುವುದರಿಂದ ನಮ್ಮ ಮನಸ್ಸು ಶುದ್ಧವಾಗಿರುತ್ತದೆ. ಜತೆಗೆ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಅಪರ ಜಿಲ್ಲಾಧಿಕಾರಿ ಗೀತಾಹುಡೇದ, ನಗರಸಭೆ ಪೌರಾಯುಕ್ತ ರಾಮದಾಸ್ ಇತರರು ಭಾಗವಹಿಸಿದ್ದರು.