

ಚಾಮರಾಜನಗರ: ಚಾಮರಾಜನಗರ ಹಾಗೂ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 1ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಜೂ.23 ರಂದು ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಅಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಚಾಮರಾಜನಗರ ಟೌನ್-1, ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲವಾಡಿ, ಸೋಮವಾರಪೇಟೆ ಟೌನ್-2, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ ಎನ್.ಜೆ.ವೈ ಹಾಗೂ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹೊನ್ನೂರು, ಕುದೇರು, ಉಮ್ಮತ್ತೂರು, ಸಂತೇಮರಹಳ್ಳಿ, ಕೆಂಪನಪುರ, ನವಿಲೂರು, ದುಗ್ಗಟ್ಟಿ, ಆಲ್ದೂರು, ಅಂಬಳೆ, ಮಂಗಲ, ವಾಟರ್ ಸಪ್ಲೈ, ಚುಂಗಡಿಪುರ, ಅವಿತ್ ಗ್ರೀನ್ ಸೋಲಾರ್, ಮೂಡಲ ಅಗ್ರಹಾರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.