ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ. 40ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಶೇ.35ರಷ್ಟು ಅಂಕ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿ ದೂ.ಸಂ 080-22212128, ಧಾರವಾಡ ಡಿ.ಸಿ. ಕಚೇರಿಯ ಆವರಣದಲ್ಲಿರುವ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿ ದೂ.ಸಂ 0836-2442465, ಮಂಗಳೂರು ಬಾವುಟಗಡ್ಡೆ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿ ದೂ.ಸಂ 0824-2425873, ಕಲಬುರಗಿ ಜಗತ್ ವೃತ್ತ, ಸೂಪರ್ ಮಾರ್ಕೆಟ್, ಎಂ.ವಿ.ಎಚ್.ಎಸ್. ಶಾಲೆ ಆವರಣದಲ್ಲಿರುವ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿ ದೂ.ಸಂ 08472-221543 ವಿಳಾಸಕ್ಕೆ ಸಂಬಂಧಪಟ್ಟ ಆಯಾಯ ಕಂದಾಯ ವಿಭಾಗಗಳಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದೆಂದು ಚಾಮರಾಜನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net