ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗೆ ಅರ್ಜಿ

Application-1-1280x720
Published on

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋಧನಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಬಯೋ ಮೆಡಿಕಲ್ ಎಂಜಿನಿಯರ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಬಯೋ ಮೆಡಿಕಲ್ ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸ್ವವಿವರದೊಂದಿಗೆ ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆ ಹಾಗೂ ಅನುಭವ ಹೊಂದಿದ್ದಲ್ಲಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ಜೂ. 30 ರೊಳಗೆ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08226-226701 ಸಂಪರ್ಕಿಸುವಂತೆ ಚಾಮರಾಜನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net