

ಚಾಮರಾಜನಗರ: ಭಾರತ ದೇಶವು ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದೆ. ದೈನಂದಿನ ಕೆಲಸ ಕಾರ್ಯಗಳನ್ನು ಲವಲವಿಕೆಯಿಂದ ಮಾಡಲು ಯೋಗ ಸಹಕಾರಿಯಾಗಿದೆ ಎಂದು ಜೆಎಸ್‌ಎಸ್ ಸಂಸ್ಥೆಯ ಪ್ರಾಂಶುಪಾಲ ಡಾ.ಎನ್.ಮಹದೇವಪ್ಪ ಹೇಳಿದರು.
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಆವರಣದಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣಾ ಸೇವಾ ಸಮಿತಿಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ದೇಶವು ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದೆ. ದೈನಂದಿನ ಕೆಲಸ ಕಾರ್ಯಗಳನ್ನು ಲವಲವಿಕೆಯಿಂದ ಮಾಡಲು ಯೋಗ ಸಹಕಾರಿಯಾಗಿದೆ. ಎಲ್ಲರು ಪ್ರತಿದಿನ ಕನಿಷ್ಟ ಒಂದು ಗಂಟೆಯಾದರು ಯೋಗಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶ್ರೀ ಪತಂಜಲಿ ಯೋಗ ಶಿಕ್ಷಣಾ ಸೇವಾ ಸಮಿತಿಯ ಪ್ರಧಾನ ಸಂಚಾಲಕ ಯೋಗ ಪ್ರಕಾಶ್ ಮಾತನಾಡಿ, ಸಂಸ್ಕಾರ, ಸಂಘಟನೆ ಮತ್ತು ಸೇವೆ ಎಂಬ ಮೂರು ಧ್ಯೇಯಗಳನ್ನಿಟ್ಟುಕೊಂಡು ಹಲವಾರು ವರ್ಷಗಳಿಂದ ಉಚಿತವಾಗಿ ಯೋಗಶಿಕ್ಷಣ ನೀಡುತ್ತಿದೆ. ನಿತ್ಯ ಯೋಗಭ್ಯಾಸ ಮಾಡುವುದರಿಂದ ಏನೆಲ್ಲಾ ಲಾಭಗಳು ಮನುಷ್ಯನಿಗೆ ದೊರೆಕುತ್ತಿದೆ ಎಂಬುದನ್ನು ತಿಳಿಸಿಕೊಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಯೋಗಶಿಕ್ಷಕ ದೊರೆಸ್ವಾಮಿ, ಲೋಕೇಶ್ವರಿ, ದೈಹಿಕ ಶಿಕ್ಷಕ ಮಂಜು, ಉಮೇಶ್, ಶಿಕ್ಷಕ ಕುಮಾರಸ್ವಾಮಿ, ಸುಮ, ರೂಪ, ಸಂಜೀವಿನ ಟ್ರಸ್ಟ್ ಸತೀಶ್, ಗೌರಿ, ಅಕ್ಷತ್‌ಜೈನ್, ನಾಗು ಹಾಗೂ ಇತರರು ಹಾಜರಿದ್ದರು.