ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Application-1-1280x720
Published on

ಚಾಮರಾಜನಗರ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯತ ಮಠಾಧಿಪತಿಗಳ ಗೋಷ್ಠಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಶೈಕ್ಷಣಿಕ ವರ್ಷದಲ್ಲಿ ನಡೆದಿರುವ ರಾಜ್ಯ ಹಾಗೂ ಕೇಂದ್ರಿಯ ಪಠ್ಯ ಕ್ರಮದ ಎಸ್‌ಎಸ್‌ಎಸ್‌ಸಿ ಪರಿಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಕೆಳಗೆ ತಿಳಿಸಿರುವ ಸಂಸ್ಥೆಗಳಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15ರೊಳಗೆ ಸಿ.ಮಹದೇವಪ್ರಸಾದ್, ಜೆಎಸ್‌ಎಸ್ ಪಾಲಿಟೆಕ್ನಿಕ್, ಮೈಸೂರು (ಮೊ.9449030588) ಎನ್.ಮಹದೇವಸ್ವಾಮಿ, ಜೆಎಸ್‌ಎಸ್ ಐಟಿಐ ಮರಿಯಾಲ, ಚಾ.ನಗರ ತಾಲೂಕು (ಮೊ.9538308797), ಎನ್.ಮಹದೇವಸ್ವಾಮಿ(7019359985) ಪ್ರಾಂಶುಪಾಲ, ಜೆಎಸ್‌ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಕೊಳ್ಳೇಗಾಲ, ಹಾಗೂ ಬಸವರಾಜಪ್ಪ (948077036262) ಪ್ರಾಂಶುಪಾಲ, ಜೆಎಸ್‌ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಗುಂಡ್ಲುಪೇಟೆ ಇವರಿಗೆ ತಲುಪಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net