ಸರ್ಕಾರಿ ಸೌಲಭ್ಯ ಪಡೆದುಕೊಳ್ಳಿ

23rajesh4
Published on

ಚಾಮರಾಜನಗರ: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿನಿಯರು ಮುಖ್ಯ ವಾಹಿನಿಗೆ ಬರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಸರಸ್ವತಿ ಸಲಹೆ ನೀಡಿದರು.

ನಗರದ ರೋಟರಿ ಭವನದಲ್ಲಿ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ರೋಟರಿ ಸಂಸ್ಥೆ, ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಆದರ್ಶ ಮಹಿಳಾ ಪ್ರಶಸ್ತಿ ಹಾಗೂ ವಿದ್ಯಾರ್ಥಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದಾನ-ಧರ್ಮಗಳಲ್ಲಿ ವಿದ್ಯಾದಾನ ಶೇಷ್ಠ. ಆದ್ದರಿಂದ ನಿರಂತರ ಪರಿಶ್ರಮದಿಂದ ವಿದ್ಯಾರ್ಥಿನಿಯರು ಅಧ್ಯಯನ ಮಾಡಿದರೆ ಪರೀಕ್ಷೆಯಲ್ಲಿ ಯಶಸ್ಸು ಖಚಿತ ಎಂದು ಅಭಿಪ್ರಾಯಪಟ್ಟರು.

ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಎಂ.ಆರ್ ಗಂಗಾಧರ್ ಮಾತನಾಡಿ, ಯಾವುದೇ ಪರೀಕ್ಷೆ ಬಂದರೂ ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ಆಗುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಯಪ್ರಜ್ಞೆ, ಶಿಸ್ತು, ಗುರು ಹಿರಿಯರಿಗೆ ಗೌರವ ಸಲ್ಲಿಸಿದರೆ ಉತ್ತಮ ವಿದ್ಯಾರ್ಥಿಯಾಗುವ ಜತೆಗೆ ಉನ್ನತ ಅಧಿಕಾರಿಯಾಗಲು ಸಾಧ್ಯ ಎಂದರು.

ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚೂಡಾ ನೂತನ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನ ಅವರನ್ನು ಸನ್ಮಾನಿಸಲಾಯಿತು. ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು, ಜಿಲ್ಲಾ ಕರಿಕಲ್ಲು ಮಾಲೀಕರ ಸಂಘ ಅಧ್ಯಕ್ಷ ಜಿ.ಎಂ.ಹೆಗಡೆ, ಭಾರತ ಸೇವಾದಳ ಅಧ್ಯಕ್ಷ ರೋಟರಿ ಬಿ.ವಿ.ವೆಂಕಟ ನಾಗಪ್ಪ ಶೆಟ್ಟಿ, ರೋಟರಿ ಸಂಸ್ಥೆ ಅಧ್ಯಕ್ಷ ಸಿ.ಎನ್.ಚಂದ್ರಪ್ರಭ ಜೈನ್, ಕಾರ್ಯದರ್ಶಿ ಅಬ್ದುಲ್ ಅಜೀಜ್ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net