ಡಾಕ್ಟರ್ ಸಿಗದೆ ನರ್ಸ್‌ನಿಂದ ಚಿಕಿತ್ಸೆ

punitha
Published on

ಚಾಮರಾಜನಗರ: ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆರೋಗ್ಯ ಸಿಬ್ಬಂದಿಯಿಂದ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೊಳ್ಳೇಗಾಲ ತಾಲೂಕಿನ ಬಸ್ತೀಪುರದ ಪುನೀತ್ ಆರೋಪಿಸಿದ್ದಾರೆ.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಲ್ಲಿ ಎಷ್ಟರಮಟ್ಟಿಗೆ ಆರೋಗ್ಯ ಸೇವೆ ದೊರೆಯುತ್ತಿದೆ ಎನ್ನುವ ಕುರಿತು ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ವಾರದ ಹಿಂದೆ ರಾತ್ರಿ 12 ಗಂಟೆ ಸಮಯದಲ್ಲಿ ನನ್ನ ತಾಯಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು. ಈ ವೇಳೆ ವ್ಯೆದ್ಯರು ಇರಲಿಲ್ಲ. ನರ್ಸ್ ಚುಚ್ಚುಮದ್ದು ನೀಡಿ ಕಳುಹಿಸಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡದಿದ್ದರೆ ಬಡವರು ಖಾಸಗಿ ಆಸ್ಪತ್ರೆಗೆ ಹೋಗುವುದು ಅನಿವಾರ್ಯ. ಇದರಿಂದ ಅವರ ಆರ್ಥಿಕ ಪರಿಸ್ಥಿತಿ ಮೇಲು ಪರಿಣಾಮ ಬೀರುತ್ತದೆ. ಅಲ್ಲದೆ, ಖಾಸಗಿ ಮೆಡಿಕಲ್ಗಳಿಗೆ ಔಷಧೋಪಚಾರ ಬರೆಯುವುದು ಸಾಮಾನ್ಯವಾಗಿದೆ. ಇತ್ತ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net