

ಚಾಮರಾಜನಗರ: ಯಳಂದೂರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲ ತಜ್ಞ ವೈದ್ಯರ ಕೊರತೆ ಇರುವ ಹಿನ್ನೆಲೆಯಲ್ಲಿ ಬಡರೋಗಿಗಳು ಚಿಕಿತ್ಸೆಗೆ ಜಿಲ್ಲಾಸ್ಪತ್ರೆ ಅಥವಾ ಮೈಸೂರಿಗೆ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಯಳಂದೂರಿನ ಗುಂಬಳ್ಳಿಯ ಕಲಾವತಿ ಹೇಳಿದ್ದಾರೆ.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಲ್ಲಿ ಎಷ್ಟರಮಟ್ಟಿಗೆ ಆರೋಗ್ಯ ಸೇವೆ ದೊರೆಯುತ್ತಿದೆ ಎನ್ನುವ ಕುರಿತು ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ನರರೋಗ, ಕಿವಿ, ಮೂಗು-ಗಂಟಲು, ಚರ್ಮರೋಗ, ನೇತ್ರ ತಜ್ಞ ಸೇರಿದಂತೆ ವೈದ್ಯರ ಸಮಸ್ಯೆ ಕಾಡುತ್ತಿದೆ. ಜನಪ್ರತಿನಿಧಿಗಳು ವೈದ್ಯರ ಹುದ್ದೆ ಭರ್ತಿ ಮಾಡುವಲ್ಲಿ ವಿಫರಾಗಿದ್ದಾರೆ. ರಾತ್ರಿ ವೇಳೆ ತುರ್ತು ಚಿಕಿತ್ಸಾ ಸಮಯದಲ್ಲಿ ವೈದ್ಯರಿಲ್ಲದೆ ಪರದಾಡಬೇಕಾದ ಪರಿಸ್ಥಿತಿಯೂ ಇದೆ ಎಂದು ವಿವರಿಸಿದ್ದಾರೆ.