

ಚಾಮರಾಜನಗರ: ಕಾಮಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ತಪಾಸಣೆ ಮಾಡುವುದಿಲ್ಲ. ಸಿಗುವ ಮಾತ್ರೆಗಳಿಂದಲೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಮೆಡಿಕಲ್ನಲ್ಲಿ ಮಾತ್ರೆಯನ್ನು ಖರೀದಿಸಬೇಕಿದೆ ಎಂದು ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಜಯಮ್ಮ ಹೇಳಿದ್ದಾರೆ.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಲ್ಲಿ ಎಷ್ಟರಮಟ್ಟಿಗೆ ಆರೋಗ್ಯ ಸೇವೆ ದೊರೆಯುತ್ತಿದೆ ಎನ್ನುವ ಕುರಿತು ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ಈ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರಕದ ಕಾರಣ ರೋಗಿಗಳು ಸಮೀಪದ ಹನೂರಿನ ಖಾಸಗಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕಿದೆ. ಗ್ರಾಮದಲ್ಲೇ ಸರ್ಕಾರಿ ಆಸ್ಪತ್ರೆ ಇದ್ದರೂ ಖಾಸಗಿ ಆಸ್ಪತ್ರೆಯನ್ನು ಅವಲಂಬಿಸಬೇಕಿದೆ ಎಂದಿದ್ದಾರೆ