ಮೂಲಸೌಕರ್ಯ ಒದಗಿಸಿ

ramya
Published on

ಹನೂರು: ರಾಮಾಪುರದಲ್ಲಿ ಸರ್ಕಾರಿ ಆಸ್ಪತ್ರೆ ಇದೆ. ಆದರೆ ಸಮರ್ಪಕ ಸೌಲಭ್ಯಗಳಿಲ್ಲದ ಪರಿಣಾಮ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ ಎಂದು ರಾಮಾಪುರದ ನಿವಾಸಿ ರಮ್ಯಾ ಹೇಳಿದ್ದಾರೆ.

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಲ್ಲಿ ಎಷ್ಟರಮಟ್ಟಿಗೆ ಆರೋಗ್ಯ ಸೇವೆ ದೊರೆಯುತ್ತಿದೆ ಎನ್ನುವ ಕುರಿತು ವಿಜಯವಾಣಿಯೊಂದಿಗೆ ಅವರು ಮಾತನಾಡಿದರು. ಹಾಗಾಗಿ ನನ್ನ ಮಗನಿಗೆ ಜ್ವರ ಬಂದಾಗ ಹನೂರಿನ ಖಾಸಗಿ ನರ್ಸಿಂಗ್ ಹೋಂಗೆ ತೆರಳಿ ಚಿಕಿತ್ಸೆ ಕೊಡಿಸಿದ್ದೇನೆ. ರಾಮಾಪುರದಲ್ಲಿ ಉತ್ತಮ ಚಿಕಿತ್ಸೆ ದೊರಕಿದ್ದರೆ ಹನೂರಿಗೆ ಆಗಮಿಸುವ ಅವಶ್ಯಕತೆ ಇರಲಿಲ್ಲ. ಆದ್ದರಿಂದ ರಾಮಾಪುರ ಆಸ್ಪತ್ರೆಗೆ ಅಗತ್ಯ ಸೌಕರ್ಯ ಒದಗಿಸುವುದರ ಜತೆಗೆ ಉತ್ತಮ ಆರೋಗ್ಯ ಸೇವೆ ನೀಡಿದರೆ ಬಡ ಜನರಿಗೆ ಅನುಕೂಲ. ಜತೆಗೆ ಬೇರೆ ಊರುಗಳ ಆಸ್ಪತ್ರೆಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net