ಆರೋಗ್ಯ ಸೇವೆಯ ಕುರಿತು ಗಂಭೀರ ಚರ್ಚೆ

24rajesh3kdp meeting
Published on

ಚಾಮಾಜನಗರ: ಜಿಲ್ಲೆಯಲ್ಲಿ ಸಕಾಲಕ್ಕೆ ಆರೋಗ್ಯ ಸೇವೆ ದೊರೆಯುತ್ತಿಲ್ಲವೆಂದು ನನಗೆ ಮಾಹಿತಿ ಬಂದಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ್‌ಗೆ ಉತ್ತರ ನೀಡಲು ತಿಳಿಸಿದರು. ವೈದ್ಯರು ಸಕಾಲಕ್ಕೆ ಬರುತ್ತಿಲ್ಲ, ಕೇಂದ್ರ ಸ್ಥಾನದಲ್ಲಿ ಉಳಿಯುತ್ತಿಲ್ಲ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಇದಕ್ಕೆ ಡಿಎಚ್‌ಒ ಡಾ.ಚಿದಂಬರ್ ಪ್ರತಿಕ್ರಿಯಿಸಿ, ಕಡ್ಡಾಯ ಹಾಜರಾತಿ ಪಡೆದುಕೊಳ್ಳುತ್ತಿದ್ದೇವೆ. ಕೆಲವರು ವಸತಿ ಸೌಲಭ್ಯವಿಲ್ಲದೆ ಕೇಂದ್ರ ಸ್ಥಾನದಲ್ಲಿಲ್ಲ ಎಂದು ಹೇಳಿದರು. ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಯಳಂದೂರು ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕುರಿತು ತಿಳಿಸಿದ್ದರು. ಆಸ್ಪತ್ರೆ ಅಭಿವೃದ್ಧಿಗೆ ಜಾಗದ ಅವಶ್ಯಕತೆ ಇದೆಯೇ ಎಂದು ಕೇಳಿದರು. ಇದಕ್ಕೆ ಡಿಎಚ್‌ಒ ಪ್ರತಿಕ್ರಿಯಿಸಿ, ಈಗ ಇರುವ ಆಸ್ಪತ್ರೆಯ ಜಾಗದಲ್ಲೇ ನೂತನ ಆಸ್ಪತ್ರೆ ನಿರ್ಮಾಣ ಮಾಡಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net