ಆಕ್ಸಿಜನ್ ದುರಂತದ ಸಂತ್ರಸ್ತರಿಂದ ಮನವಿ ಸಲ್ಲಿಕೆ

Published on

ಚಾಮರಾಜನಗರ: ಆಕ್ಸಿಜನ್ ದುರಂತದ ಸಂತ್ರಸ್ತರು ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ರೇಷ್ಮೆ, ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ಗೆ ಸೋಮವಾರ ಮನವಿ ಸಲ್ಲಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದ ಆವರಣದಲ್ಲಿ ಎಸ್‌ಡಿಪಿಐ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ನಗರಸಭೆ ಸದಸ್ಯ ಮಹೇಶ್ ಗಾಳೀಪುರ ನೇತೃತ್ವದಲ್ಲಿ ಇಬ್ಬರೂ ಸಚಿವರನ್ನು ಸಂತ್ರಸ್ತರು ಭೇಟಿ ಮಾಡಿದರು. ತಮಗೆ ಹೊರಗುತ್ತಿಗೆ ಆಧಾರದಲ್ಲಿ ನೀಡಿರುವ ಕೆಲಸಕ್ಕೆ ಸಂಬಳ ನೀಡಿಲ್ಲ. ಅಲ್ಲದೆ ತಮಗೆ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡಲು ಇಷ್ಟವಿಲ್ಲ. ಸರ್ಕಾರ ಕೊಟ್ಟಿರುವ ಭರವಸೆಯಂತೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಕೋರಿದರು. ಇದಕ್ಕೆ ಸಚಿವರು ಕ್ರಮವಹಿಸುವುದಾಗಿ ತಿಳಿಸಿ ಹೊರಟರು. ಒಟ್ಟಾರೆ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ದೊರೆಯಲಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net