ಜು.21ರಂದು ಅಖಿಲ ಭಾರತ ವೀರಶೈವ ಮಹಾಸಭಾ ಚುನಾವಣೆ

Published on

ಚಾಮರಾಜನಗರ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕ ಹಾಗೂ ನಿರ್ದೇಶಕ ಸ್ಥಾನಗಳಿಗೆ ಜು.21ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಈ ಸಂಬಂಧ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಪ್ರಕ್ರಿಯೆ ಜೂ. 27ರಿಂದ ಆರಂಭವಾಗಲಿದೆ. ಮಹಾಸಭೆಯ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಜೂ. 27ರ ಬೆಳಗ್ಗೆ 10.30 ರಿಂದ ನಾಮಪತ್ರ ಸ್ವೀಕರಿಸುವ ಕಾರ್ಯ ಆರಂಭವಾಗಲಿದೆ. ನಾಮಪತ್ರ ಸ್ವೀಕರಿಸಲು ಜು.4ರ ಮಧ್ಯಾಹ್ನ 3 ಅಂತಿಮ ದಿನ. ಜು.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, 8ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ.

ಅಂತಿಮವಾಗಿ ಜು. 21ರಂದು ನಗರದ ಸತ್ತಿ ರಸ್ತೆಯಲ್ಲಿರುವ ಮಹಾಸಭಾ ಕಚೇರಿಯಲ್ಲಿ ಮತದಾನ ನಡೆಯಲಿದೆ. ನಂತರ ಮತ ಎಣಿಕೆ ನಡೆದು ಫಲಿತಾಂಶವನ್ನು ಅಂದೇ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net