ಕೆಂಪೇಗೌಡರ ಜಯಂತಿ ಆಚರಣೆ 27ಕ್ಕೆ

Kempegowda
Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜೂ. 27ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಾಲಯದ ಬಳಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.

ಬೆಳಗ್ಗೆ 11 ಗಂಟೆಗೆ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರು ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಉಪಸ್ಥಿತರಿರುವರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್‌ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭಾ ಸದಸ್ಯೆ ಎಚ್.ಎಸ್. ಮಮತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮೈಸೂರು ದಕ್ಷಿಣ ವಲಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ. ಬಿ.ಸಿ. ವಿಜಯಕುಮಾರ್ ಬಲ್ಲೇನಹಳ್ಳಿ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net