

ಚಾಮರಾಜನಗರ: ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ಜನಾಂಗಕ್ಕೆ ಸೇರಿರಬೇಕು. ಪ್ರವರ್ಗ-1ಕ್ಕೆ ಸೇರಿರುವ ಅಭ್ಯರ್ಥಿಗಳು 40 ವರ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳ ಒಳಗಿರಬೇಕು. ಅಭ್ಯರ್ಥಿಗಳು ಕಾನೂನು ಪದವೀಧರರಾಗಿದ್ದು, ಹೆಸರನ್ನು ಬಾರ್ ಕೌನ್ಸಿಲ್‌ನಲ್ಲಿ ನೊಂದಾಯಿಸಿರಬೇಕು ಹಾಗೂ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 26-07-2024ಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿ ನಾಲ್ಕು ವರ್ಷಗಳಾಗಿದ್ದು, ತರಬೇತಿಯನ್ನು ಸರ್ಕಾರಿ ಅಭಿಯೋಜಕರು, ಸರ್ಕಾರಿ ವಕೀಲರು ಅಥವಾ 15 ವರ್ಷಕ್ಕೆ ಕಡಿಮೆ ಇಲ್ಲದಂತೆ ವಕೀಲ ವೃತ್ತಿ ನಡೆಸುತ್ತಿರುವ ವಕೀಲರ ಬಳಿ ಪಡೆಯಬೇಕಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಆಯಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅರ್ಜಿಯ ಜೊತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಜು.26ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.