

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದಲ್ಲಿ ಜೂ.28ರಂದು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಎಸ್ಪಿ ಹಾಗೂ ಶಾಸಕರ ಸಮ್ಮುಖದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆ, ಸಮಸ್ಯೆ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.