ಮೂವರಿಗೆ ಸಿಜಿಕೆ ರಂಗಪ್ರಶಸ್ತಿ

Published on

ಚಾಮರಾಜನಗರ: ರಾಷ್ಟ್ರಮಟ್ಟದ ಸಿಜಿಕೆ ರಂಗಪ್ರಶಸ್ತಿಗೆ ಕೊಳ್ಳೇಗಾಲದ ಎಂ.ಅರುಣ್‌ಕುಮಾರ್, ಹರದನಹಳ್ಳಿ ನಟರಾಜ್ ಹಾಗೂ ಬಾಗಳಿ ರಾಜಶೇಖರ್ ಅವರನ್ನು ಆಯ್ಕೆಮಾಡಲಾಗಿದೆ.

ಕರ್ನಾಟಕ ಬೀದಿ ನಾಟಕ ಅಕಾಡೆಮಿ, ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಬೆಂಗಳೂರು, ಚಾಮರಾಜನಗರ ರಂಗವಾಹಿನಿ ಸಂಸ್ಥೆ ಸಹಯೋಗದಲ್ಲಿ ರಂಗಭೂಮಿಯಲ್ಲಿ ದುಡಿಯುತ್ತಿರುವ ರಂಗಕರ್ಮಿಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ನಗರದ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜು.14 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ ರಂಗ ಪರಿಷತ್ ಕೇಂದ್ರ ಸಮಿತಿಯ ರಾಜ್ಯ ಸಂಚಾಲಕ ಸಿ.ಎಂ.ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net