

ಚಾಮರಾಜನಗರ: ಭಾರತ ಮತ್ತು ಸೌತ್ ಆಫ್ರಿಕಾ ನಡುವೆ ಶನಿವಾರ ಸಂಜೆ ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಶ್ರೀ ಹರಳೆಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಬೆಳಿಗ್ಗೆ ದೇವಾಲಯದ ಅರ್ಚಕ ಅನಂತ ಪ್ರಸಾದ್ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಭಾರತ ತಂಡ ಈ ಬಾರಿಯ ವಿಶ್ವಕಪ್ ಜಯಿಸಲೀ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಹೆಬ್ಬಸೂರು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಂ.ಮಧು ಮಾತನಾಡಿ, ನಮ್ಮ ದೇಶದಲ್ಲಿ ಕ್ರಿಕೇಟ್ ಆಟ ಭಾವನಾತ್ಮಕವಾಗಿ ಪ್ರತಿಯೊಬ್ಬರನ್ನು ಒಟ್ಟುಗೂಡಿಸುತ್ತದೆ. ಈ ನಿಟ್ಟಿನಲ್ಲಿ ಈ ಬಾರಿಯ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಗೆಲುವನ್ನು ಸಾಧಿಸಲಿ. ಕೋಟ್ಯಾಂತರ ಜನರ ಪ್ರಾರ್ಥನೆ ಲಿಸುವಂತಾಗಲಿ ಎಂದು ಹೇಳಿದರು.
ಈ ವೇಳೆ ನವೀನ್, ಹರೀಶ್ ಹಾಗೂ ಇತರರು ಹಾಜರಿದ್ದರು.