ಪಿಎಂ ಕಿಸಾನ್ ಸವಲತ್ತು ಪಡೆಯಲು ಇ-ಕೆವೈಸಿ ಕಡ್ಡಾಯ

Pm Kisan Nidhi
Pm Kisan Nidhi
Published on

ಚಾಮರಾಜನಗರ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರಿಗೆ ಆರ್ಥಿಕ ನೆರವು ನೀಡುತ್ತಿದ್ದು, ಸದರಿ ಯೋಜನೆಯಡಿ ಈಗಾಗಲೇ ಸೌಲಭ್ಯ ಪಡೆಯುತ್ತಿರುವ ರೈತರು ಮುಂದಿನ ಕಂತುಗಳನ್ನು ಪಡೆಯಲು ಇ-ಕೆವೈಸಿ ಕಡ್ಡಾಯವಾಗಿರುತ್ತದೆ.

ಚಾಮರಾಜನಗರ ತಾಲೂಕಿನಾದ್ಯಂತ ಒಟ್ಟು 44,117 ರೈತರು ನೋಂದಾಯಿಸಿಕೊಂಡಿದ್ದು, 43,164 ರೈತರು ಸವಲತ್ತನ್ನು ಪಡೆಯುತ್ತಿದ್ದಾರೆ. ಇದರಲ್ಲಿ ಇ-ಕೆವೈಸಿ ಮಾಡಿಸಲು 8,996 ಜನ ಬಾಕಿ ಇದ್ದು, ಈವರೆಗೆ 34,168 ರೈತರು ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ. ಈ ರೈತರು ಮುಂದಿನ ಕಂತಿನ ಅನುದಾನ ಪಡೆಯಲು ಅರ್ಹರಿರುತ್ತಾರೆ. ಆದರೆ 8,996 ರೈತರು ಇ-ಕೆವೈಸಿ ಮಾಡಿಸಲು ಬಾಕಿ ಇದ್ದು, ಸದರಿ ರೈತರಿಗೆ ಮುಂದಿನ ಕಂತಿನ ಅನುದಾನ ಪಾವತಿಗೆ ತೊಂದರೆಯಾಗುತ್ತದೆ. ಆದ್ದರಿಂದ ಸಂಬಂಧಿಸಿದ ರೈತರು ಪಿಎಂ ಕಿಸಾನ್ ಸಮ್ಮಾನ್’ ವೆಬ್ ಸೈಟ್‌ನಲ್ಲಿ ತಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಬಾಕಿ ಇರುವ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ ಇ-ಕೆವೈಸಿ ಮಾಡಿಸಲು ಕ್ರಮವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net