

ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ನಮ್ಮ ಜಮೀನಿನಲ್ಲಿ 50 ರಿಂದ 60ಕ್ಕೂ ಹೆಚ್ಚು ತೆಂಗಿನ ಸಸಿಗಳು ನಾಶವಾದವು ಎಂದು ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮದ ಸೋಮಣ್ಣ ಹೇಳಿದ್ದಾರೆ.
ಕಾಡಾನೆ ಹಾವಳಿ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿರುವ ಅವರು, ಈ ಬಗ್ಗೆ ಅರಣ್ಯ ಇಲಾಖೆಯು ಕೂಡ ದೂರನ್ನು ನೀಡಿ ಪರಿಹಾರಕ್ಕೆ ಮನವಿ ಮಾಡಲಾಗಿದೆ. ಆದರೆ ಅವರು ಕೊಡುವ ಬೆಳೆಹಾನಿ ಪರಿಹಾರವೂ ಸಾಕಾಗುವುದಿಲ್ಲ. ರೈತರಿಗೆ ದುಪ್ಪಟ್ಟು ಪರಿಹಾರ ಮೊತ್ತವನ್ನು ನೀಡುವಂತೆ ಕ್ರಮವಹಿಸಬೇಕು. ಅರಣ್ಯ ಇಲಾಖೆ, ಜಿಲ್ಲಾಡಳಿತ, ಸರ್ಕಾರ ಮನಸ್ಸು ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.