

ಚಾಮರಾಜನಗರ: ಕಾಡಂಚಿನಲ್ಲಿ ಸೋಲಾರ್ ತಂತಿ ಬೇಲಿ ಹಾಗೂ ರೈಲು ಕಂಬಿಗಳನ್ನು ಸೂಕ್ತ ರೀತಿಯಲ್ಲಿ ಅಳವಡಿಸಬೇಕು ಎಂದು ಯಳಂದೂರು ತಾಲೂಕಿನ ಉಪ್ಪಿನಮೋಳೆ ಗ್ರಾಮದ ಬಿಳಿಗಿರಿ ಒತ್ತಾಯಿಸಿದ್ದಾರೆ.
ಕಾಡಾನೆ ಹಾವಳಿ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿರುವ ಅವರು, ಬೇಸಿಗೆ ಸಮಯದಲ್ಲಿ ಆಹಾರ ಹಾಗೂ ನೀರನ್ನು ಅರಸಿ ಬರುವ ಕಾಡುಪ್ರಾಣಿಗಳಿಗೆ ಅರಣ್ಯ ಇಲಾಖೆ ಕಾಡಿನಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ಈ ಸಮಸ್ಯೆಗಳಿಗೆ ಪರಿಹಾರ ದೊರೆತಂತಾಗುತ್ತದೆ ಎಂದಿದ್ದಾರೆ.