ನೀರು ಸರಬರಾಜಿನಲ್ಲಿ ವ್ಯತ್ಯಯ

Water Supply
Published on

ಚಾಮರಾಜನಗರ: ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ಜು.4ರಿಂದ 6ರವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ತಿ.ನರಸೀಪುರದ ಕುಡಿಯುವ ನೀರು ಸರಬರಾಜು ಪಂಪಿಂಗ್ ಕೇಂದ್ರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಇಲಾಖೆಯಿಂದ ಹೊಸದಾಗಿ ಜಾಕ್‌ವೆಲ್ ಪೈಪ್‌ಲೈನ್ ಕಾಮಗಾರಿ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನ ನೀರು ಸರಬರಾಜು ವ್ಯತ್ಯಯವಾಗಲಿದೆ. ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net