ಪ್ರೇರಣಾ ವಿದ್ಯಾಸಂಸ್ಥೆಯಿಂದ ಮಕ್ಕಳಿಗೆ ಅಕ್ಷರಾಭ್ಯಾಸ

02rajesh1
Published on

ಚಾಮರಾಜನಗರ : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ತೆಗೆ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಕಲಿಸಿ, ಸಮಯ ಪರಿಪಾಲನೆ ಹಾಗೂ ಶಿಸ್ತು ರೂಡಿಸುವುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಸ್ಪೂರ್ತಿ ಟ್ರಸ್ಟ್‌ನ ಅಧ್ಯಕ್ಷ ಬಿ.ಪಿ ಪ್ರಕಾಶ್ ತಿಳಿಸಿದರು

ತಾಲೂಕಿನ ಅಂಕನಶೆಟ್ಟಿಪುರದಲ್ಲಿರುವ ಪ್ರೇರಣಾ ವಿದ್ಯಾ ಸಂಸ್ಥೆಯಲ್ಲಿ 2024-25ನೇ ಸಾಲಿಗೆ ಎಲ್‌ಕೆಜಿ ಮತ್ತು ಯುಕೆಜಿಗೆ ಪ್ರವೇಶ ಪಡೆದಿರುವ 48ಕ್ಕೂ ಹೆಚ್ಚು ಮಕ್ಕಳಿಗೆ ಹರದನಹಳ್ಳಿ ದಿವ್ಯಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಳೆದ 14 ವರ್ಷಗಳಿಂದ ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಶಾಲೆಯನ್ನು ಆರಂಭಿಸಿದ್ದೇವೆ. ಬಹಳ ಶ್ರದ್ದೆ ಹಾಗೂ ಪ್ರಾಮಾಣಿಕತೆಯಿಂದ ಸಂಸ್ಥೆಯನ್ನು ಮುನ್ನಡೆಸಲಾಗುತ್ತಿದೆ. ಪೋಷಕರು ಹಾಗೂ ಸಾರ್ವಜನಿಕರ ಸಹಕಾರದಿಂದ 300ಕ್ಕು ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದರು. ಸ್ಪೂರ್ತಿ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ವಕೀಲ ಶಿವಸ್ವಾಮಿ ಮಾತನಾಡಿ, ಶಿಕ್ಷಣ ಜೀವನವನ್ನೇ ಬದಲಿಸುತ್ತದೆ. ಹೀಗಾಗಿ ಪ್ರತಿಯೊಬ್ಬರು ವಿದ್ಯಾವಂತರಾಗಬೇಕು. ಮಕ್ಕಳು ಕಲಿಕೆಗೆ ಹೆಚ್ಚಿನ ಒತ್ತು ನೀಡಿ ಎಂದು ಸಲಹೆ ನೀಡಿದರು.

ದಿವ್ಯಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇಣುಗೋಪಾಲ್, ಸ್ಪೂರ್ತಿ ಟ್ರಸ್ಟ್ ಸದಸ್ಯ ನಟರಾಜನ್, ಪ್ರೇರಣಾ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಎಚ್.ಜಿ.ಮಹೇಶ್‌ಕುಮಾರ್, ಸಹ ಶಿಕ್ಷಕಿ ಪಲ್ಲವಿ, ದೀಪಾ, ರಾಧ, ಜಿ.ದೀಪಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net