

ಚಾಮರಾಜನಗರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2024-25ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಹಾಗೂ ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ವಿದ್ಯಾರ್ಥಿಗಳು ವೆಬ್‌ಸೈಟ್ ಮೂಲಕ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ಜು.20ರೊಳಗೆ ಪ್ರವೇಶ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ 08226-222180 ಹಾಗೂ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.