

ಚಾಮರಾಜನಗರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಮಾತ್ರ) 2024-25ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ, ತಾಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. ಅರ್ಜಿಯನ್ನು ವೆಬ್‌ಸೈಟ್ ಮೂಲಕ ಜು.20ರೊಳಗೆ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ಜು.31 ರೊಳಗೆ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ 08226-222180 ಹಾಗೂ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.